ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕೊಹ್ಲಿ, ರೋಹಿತ್, ಪಂತ್ ಗೆ ಟಾಪ್ ಸ್ಥಾನ

ಗುರುವಾರ, 10 ಜೂನ್ 2021 (09:37 IST)
ದುಬೈ: ಐಸಿಸಿ ಲೇಟೆಸ್ಟ್ ಟೆಸ್ಟ್ ಶ್ರೇಯಾಂಕ ಪ್ರಕಟಿಸಿದ್ದು, ಟೀಂ ಇಂಡಿಯಾದಿಂದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ.


ವಿರಾಟ್ ಕೊಹ್ಲಿ ಐದನೇ ಸ್ಥಾನದಲ್ಲಿದ್ದರೆ, ರೋಹಿತ್ ಮತ್ತು ರಿಷಬ್ ಪಂತ್ ಆರನೇ ಸ್ಥಾನವನ್ನು ಜಂಟಿಯಾಗಿ ಹಂಚಿಕೊಂಡಿದ್ದಾರೆ. ಪಂತ್ ಆಸ್ಟ್ರೇಲಿಯಾ, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಬೌಲರ್ ಗಳ ಪೈಕಿ ಆಸ್ಟ್ರೇಲಿಯಾದ ಪ್ಯಾಟ್ ಕ್ಯುಮಿನ್ಸ್ 908 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ರವಿಚಂದ್ರನ್ ಅ‍ಶ್ವಿನ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಉಳಿದಂತೆ ಯಾವುದೇ ಭಾರತೀಯ ಬೌಲರ್ ಟಾಪ್ 10 ರೊಳಗೆ ಸ್ಥಾನ ಪಡೆದಿಲ್ಲ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಎರಡನೇ ಸ್ಥಾನ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ