ದುಬೈ: ಕೊರೋನಾ ಭೀತಿಯಲ್ಲಿರುವ ಭಾರತದಲ್ಲಿ ಟಿ20 ವಿಶ್ವಕಪ್ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಜುಲೈನಲ್ಲಿ ನಿರ್ಧಾರವಾಗಲಿದೆ.
ಅಕ್ಟೋಬರ್-ನವಂಬರ್ ನಲ್ಲಿ ಭಾರತದಲ್ಲಿ ನಡೆಯಬೇಕಿದ್ದ ವಿಶ್ವಕಪ್ ನ್ನು ಬೇರೆ ದೇಶಕ್ಕೆ ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಐಸಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
ವಿಶ್ವಕಪ್ ಎಂದ ಮೇಲೆ ಒಂದು ವಾರ ಮೊದಲು ನಿರ್ಧಾರ ತೆಗೆದುಕೊಳ್ಳಲಾಗದು. ಹೀಗಾಗಿ ಜುಲೈನಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಬೇರೆ ಸ್ಥಳ ನಿಗದಿಯಾದರೆ ಅಲ್ಲಿ ತಯಾರಿ ನಡೆಸಲು ಸಮಯ ಬೇಕಾಗುತ್ತದೆ ಎಂದು ಐಸಿಸಿ ಮೂಲಗಳು ಹೇಳಿವೆ.