ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಓಪನರ್ ಆಗಿ ಕಣಕ್ಕಿಳಿದಿದ್ದರು. ಎರಡೂ ಇನಿಂಗ್ಸ್ ಗಳಲ್ಲಿ ಅವರು ಉತ್ತಮವಾಗಿ ಆಡಿದ್ದರು. ಓಪನರ್ ಆಗಿ ತನ್ನ ಸಾಮರ್ಥ್ಯ ಸಾಬೀತುಪಡಿಸಿರುವ ರಾಹುಲ್ ಗೆ ಈಗ ಎರಡನೇ ಪಂದ್ಯದಲ್ಲಿ ರೋಹಿತ್ ಗಾಗಿ ಸ್ಥಾನ ಬಿಟ್ಟುಕೊಡಲೇಬೇಕಾಗುತ್ತದೆ.
ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಹುಲ್ ರನ್ನು ತಂಡದಿಂದ ಹೊರಗಿಡುವ ಸಾಧ್ಯತೆಯಂತೂ ಇಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೆ ದೇವದತ್ ಪಡಿಕ್ಕಲ್ ರನ್ನು ಹೊರಗಿಟ್ಟು ಮೂರನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಬಹುತೇಕ ನಿಶ್ಚಿತವಾಗಿದೆ.