IND vs AUS Test: ಬಹಳ ದಿನಗಳ ನಂತರ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಈ ವಾತಾವರಣ

Krishnaveni K

ಶನಿವಾರ, 23 ನವೆಂಬರ್ 2024 (15:55 IST)
Photo Credit: BCCI
ಪರ್ತ್: ನ್ಯೂಜಿಲೆಂಡ್ ವಿರುದ್ಧ ಸತತ ಮೂರು ಟೆಸ್ಟ್ ಪಂದ್ಯಗಳನ್ನು ಸೋತ ಬಳಿಕ ಟೀಂ ಇಂಡಿಯಾ ಮಾನಸಿಕವಾಗಿ ಕುಗ್ಗಿ ಹೋಗಿತ್ತು. ಆದರೆ ಈಗ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ನೀಡಿರುವ ಪ್ರದರ್ಶನ ತಂಡದ ಆತ್ಮಸ್ಥೈರ್ಯ ಹೆಚ್ಚಿಸಿದೆ. ಬಹಳ ದಿನಗಳ ನಂತರ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ವಾತಾವರಣ ಬದಲಾಗಿದೆ.

ಭಾರತ ಮೊದಲ ಇನಿಂಗ್ಸ್ ನಲ್ಲಿ 150 ರನ್ ಗಳಿಗೆ ಆಲೌಟ್ ಆದಾಗ ಮತ್ತೆ ಬ್ಯಾಟಿಗರ ವೈಫಲ್ಯ ನೋಡಿ ಅಭಿಮಾನಿಗಳು ಹಿಡಿಶಾಪ ಹಾಕಿದ್ದರು. ಆದರೆ ನಾಯಕನಾಗಿ ಮುಂಚೂಣಿಯಲ್ಲಿ ನಿಂತು ತಂಡದ ಬೌಲಿಂಗ್ ನಿಭಾಯಿಸಿದ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾವನ್ನು ಕೇವಲ 104 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಇದರಿಂದಾಗಿ ಭಾರತಕ್ಕೆ 46 ರನ್ ಗಳ ಮುನ್ನಡೆ ಲಭಿಸಿದೆ.

ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ಬ್ಯಾಟಿಂಗ್ ಮಾಡಿದ ಪರಿ ನೋಡಿ ಇಡೀ ಡ್ರೆಸ್ಸಿಂಗ್ ರೂಂ ರಿಲ್ಯಾಕ್ಸ್ ಮೂಡ್ ನಲ್ಲಿತ್ತು. ಇಂದು ದ್ವಿತೀಯ ದಿನದಂತ್ಯಕ್ಕೆ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೇ 172 ರನ್ ಗಳಿಸಿದ್ದು ಒಟ್ಟು 218 ರನ್ ಗಳ ಮುನ್ನಡೆ ಪಡೆದುಕೊಂಡಿದೆ.

ಅದರಲ್ಲೂ ಕೆಎಲ್ ರಾಹುಲ್-ಯಶಸ್ವಿ ಜೈಸ್ವಾಲ್ ಜೋಡಿ ಬ್ಯಾಟಿಂಗ್ ಮಾಡಿದ ರೀತಿ ಭಾರತದ ಭವಿಷ್ಯ ಸುಭದ್ರವಾಗಿದೆ ಎಂದು ತೋರಿಸುತ್ತಿತ್ತು. ಇಬ್ಬರೂ ಮನಮೋಹಕ ಹೊಡೆತಗಳ ಮೂಲಕ ತಂಡದ ಇನಿಂಗ್ಸ್ ಕಟ್ಟಿದ್ದಾರೆ. ಜೈಸ್ವಾಲ್ ಇದೀಗ 90 ರನ್ ಗಳಿಸಿ ಶತಕದ ಅಂಚಿನಲ್ಲಿದ್ದಾರೆ. ಅತ್ತ ಕೆಎಲ್ ರಾಹುಲ್ 62 ರನ್ ಗಳಿಸಿದ್ದಾರೆ. ಇಬ್ಬರೂ ನಾಳೆಗೆ ಶತಕ ಗಳಿಸಲಿ ಎಂಬುದೇ ಅಭಿಮಾನಿಗಳ ಹಾರೈಕೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ