IND vs BAN T20: ಟೀಂ ಇಂಡಿಯಾದಲ್ಲಿ ಇಂದು ಬದಲಾವಣೆ ಡೌಟ್

Krishnaveni K

ಬುಧವಾರ, 9 ಅಕ್ಟೋಬರ್ 2024 (08:49 IST)
ದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆಯಾಗಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವುದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯಲ್ಲಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ಇಂದೇ ಸರಣಿ ಕೈವಶ ಮಾಡಿಕೊಳ್ಳಲಿದೆ.

ಕಳೆದ ಪಂದ್ಯದಲ್ಲಿ ಭಾರತದ ಪರ ಮಯಾಂಕ್ ಯಾದವ್, ನಿತೀಶ್ ರೆಡ್ಡಿ ಪದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲ ಇಬ್ಬರೂ ಯುವ ಆಟಗಾರರು ತಮಗೆ ಸಿಕ್ಕ ಅವಕಾಶವನ್ನುಬಳಸಿಕೊಂಡಿದ್ದಾರೆ. ಓಪನರ್ ಆಗಿ ಅನುಭವಿ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮರನ್ನು ಕಳುಹಿಸಲಾಗಿತ್ತು. ಈ ತಂತ್ರವೂ ಫಲಕೊಟ್ಟಿದೆ.

ಹೀಗಾಗಿ ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಎಲ್ಲಕ್ಕಿಂತ ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್, ಮಯಾಂಕ್ ಯಾದವ್ ಬೌಲಿಂಗ್ ಇಂಪ್ರೆಸಿವ್ ಆಗಿತ್ತು. ಇಂದೂ ಕೂಡಾ ಅದು ಮುಂದುವರಿಯುವ ನಿರೀಕ್ಷೆಯಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು ಜಿಯೋ ಸಿನಿಮಾ ಆಪ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ