IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ
ಕಳೆದ ಎರಡೂ ಪಂದ್ಯಗಳಲ್ಲೂ ಇಂಗ್ಲೆಂಡ್ ತಂಡವೇ ಟಾಸ್ ಗೆದ್ದಿತ್ತು. ಕಳೆದ ಎರಡು ಪಂದ್ಯಗಳಲ್ಲಿ ಮೊದಲು ಫೀಲ್ಡಿಂಗ್ ಮಾಡಿದ್ದ ಇಂಗ್ಲೆಂಡ್ ಕೈ ಸುಟ್ಟುಕೊಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಪ್ರಕಟಿಸಿದೆ.
ಈ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದೆ. ಜಸ್ಪ್ರೀತ್ ಬುಮ್ರಾ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದು ಪ್ರಸಿದ್ಧ ಕೃಷ್ಣ ಸ್ಥಾನ ಕಳೆದುಕೊಂಡಿದ್ದಾರೆ. ಉಳಿದಂತೆ ತಂಡ ಕಳೆದ ಪಂದ್ಯದಲ್ಲಿ ಆಡಿದಂತೆಯೇ ಇದೆ. ಕರುಣ್ ನಾಯರ್, ನಿತೀಶ್ ಕುಮಾರ್ ಸ್ಥಾನ ಉಳಿಸಿಕೊಂಡಿದ್ದಾರೆ.
ಇತ್ತ ಇಂಗ್ಲೆಂಡ್ ತಂಡವೂ ಒಂದು ಬದಲಾವಣೆ ಮಾಡಿಕೊಂಡಿದೆ. ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.