IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್
ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಗಳಿಸಿ ಮಿಂಚಿದ್ದ ಶುಭಮನ್ ಎರಡನೇ ಇನಿಂಗ್ಸ್ ನಲ್ಲಿ ಶತಕ ಸಿಡಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇದೀಗ ಚಹಾ ವಿರಾಮದ ವೇಳೆಗೆ ಭಾರತ 4 ವಿಕೆಟ್ ನಷ್ಟಕ್ಕೆ 304 ರನ್ ಗಳಿಸಿ ಒಟ್ಟು 485 ರನ್ ಗಳ ಮುನ್ನಡೆ ಸಾಧಿಸಿದೆ.
ಶುಭಮನ್ 100 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ರವೀಂದ್ರ ಜಡೇಜಾ 31 ರನ್ ಗಳಿಸಿ ಸಾಥ್ ನೀಡುತ್ತಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ನಾಯಕನಾಗಿ ದ್ವಿಶತಕ ಸಿಡಿಸಿದ ಮೂರನೇ ಆಟಗಾರ ಎಂಬ ದಾಖಲೆ ಮಾಡಿದ್ದರು.
ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ ಶತಕ ಸಿಡಿಸುವ ಮೂಲಕ ಒಂದೇ ಪಂದ್ಯದಲ್ಲಿ ದ್ವಿಶತಕದ ಬಳಿಕ ಎರಡನೇ ಇನಿಂಗ್ಸ್ ನಲ್ಲೂ ಶತಕ ಸಿಡಿಸಿದ ಭಾರತದ ಮೂರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು. ಇದಕ್ಕೆ ಮೊದಲು ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ್ದರು.