ರಾಜ್ ಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ.
ರೋಹಿತ್ ಶರ್ಮಾಗೆ ಇದು ಟೆಸ್ಟ್ ಕ್ರಿಕೆಟ್ ನಲ್ಲಿ 11 ನೇ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 47 ಶತಕವಾಗಿತ್ತು. ಈ ಮೂಲಕ ಭಾರತದ ಪರ ಆರಂಭಿಕರಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು. ಇದು ಆರಂಭಿಕರಾಗಿ ರೋಹಿತ್ ಗೆ ಮೂರನೇ ಶತಕವಾಗಿತ್ತು. ಗವಾಸ್ಕರ್ 4 ಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್ ಹೊರತಾಗಿ ಕೆಎಲ್ ರಾಹುಲ್, ವಿಜಯ್ ಮರ್ಚೆಂಟ್, ಮುರಳಿ ವಿಜಯ್ ಕೂಡಾ 3 ಶತಕ ಸಿಡಿಸಿದ್ದರು.
ಟಾಸ್ ಗೆದ್ದು ಇಂದು ರೋಹಿತ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಆರಂಭದಲ್ಲಿಯೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ವೇಳೆ ಜೊತೆಯಾದ ರೋಹಿತ್ ಮತ್ತು ರವೀಂದ್ರ ಜಡೇಜಾ ಇದುವರೆಗೆ 181 ರನ್ ಗಳ ಜೊತೆಯಾಟವಾಡಿದ್ದಾರೆ. ರೋಹಿತ್ ಇತ್ತೀಚೆಗಿನ ವರದಿ ಬಂದಾಗ 3 ಸಿಕ್ಸರ್, 12 ಬೌಂಡರಿ ಸಹಿತ 120 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ರೋಹಿತ್ ಗೆ ತಕ್ಕ ಸಾಥ್ ನೀಡುತ್ತಿರುವ ಜಡೇಜಾ ತವರಿನ ಅಂಗಣದಲ್ಲಿ ಭರ್ಜರಿ ಆಟವಾಡುತ್ತಿದ್ದು 78 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.
ಇತ್ತೀಚೆಗಿನ ವರದಿ ಬಂದಾಗ ಭಾರತ 3 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿದೆ. ಇಂಗ್ಲೆಂಡ್ ಪರ ಮಾರ್ಕ್ ವುಡ್ 2, ಟಾಮ್ ಹಾರ್ಟ್ಲೀ 1 ವಿಕೆಟ್ ಕಬಳಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದಾಗ ಜೊತೆಯಾದ ಈ ಜೋಡಿ ಭಾರತಕ್ಕೆ ಸುಭದ್ರ ಅಡಿಪಾಯ ಹಾಕಿಕೊಟ್ಟಿದೆ.