IND vs ENG ODI: ಅಪರೂಪಕ್ಕೆ ಗಾಯಗೊಂಡ ವಿರಾಟ್ ಕೊಹ್ಲಿ, ಇಂದಿನ ಪಂದ್ಯಕ್ಕೆ ಅಲಭ್ಯ

Krishnaveni K

ಗುರುವಾರ, 6 ಫೆಬ್ರವರಿ 2025 (13:28 IST)
ನಾಗ್ಪುರ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಅಪರೂಪಕ್ಕೆ ಗಾಯಗೊಂಡ ಕೊಹ್ಲಿ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ನಿನ್ನೆ ರಾತ್ರಿಯಿಂದ ವಿರಾಟ್ ಮೊಣಕಾಲಿನ ನೋವಿಗೊಳಗಾಗಿದ್ದಾರೆ. ಹೀಗಾಗಿ ಅವರು ಇಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಟಾಸ್ ಬಳಿಕ ಮಾತನಾಡಿದ ರೋಹಿತ್ ನಾವು ಮೊದಲು ಬೌಲಿಂಗ್ ಆಯ್ದುಕೊಳ್ಳಲು ಬಯಸಿದ್ದೆವು ಎಂದಿದ್ದಾರೆ.

ಈ ಪಂದ್ಯದ ಮೂಲಕ ಹರ್ಷಿತ್ ರಾಣಾ ಮತ್ತು ಯಶಸ್ವಿ ಜೈಸ್ವಾಲ್ ಪದಾರ್ಪಣೆ ಮಾಡುತ್ತಿದ್ದಾರೆ. ಮೊಹಮ್ಮದ್ ಶಮಿ ಬಹಳ ದಿನಗಳ ನಂತರ ಏಕದಿನ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಬ್ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ