ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ಟೆಸ್ಟ್ ಪಂದ್ಯ ಕೊನೆಗೂ ಇಂದು ವರುಣನ ಕೃಪೆಯಿಂದ ಆರಂಭವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ನಿನ್ನೆಯ ದಿನವಿಡೀ ಮಳೆಯಿಂದಾಗಿ ರದ್ದಾಗಿತ್ತು. ಟಾಸ್ ಕೂಡಾ ನಡೆದಿರಲಿಲ್ಲ. ಆದರೆ ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿದೆ. ಇಂದು ಮೋಡ ಕವಿದ ವಾತಾವರಣವಿದೆ. ಹಾಗಿದ್ದರೂ ಮಳೆಯಾಗಿರಲಿಲ್ಲ. ಹೀಗಾಗಿ ಇಂದು ಪಂದ್ಯ ಆರಂಭವಾಗಿದೆ.
ಭಾರತ ತಂಡ ಈ ಪಂದ್ಯಕ್ಕೆ ಮೂವರು ಸ್ಪಿನ್ನರ್ ಮತ್ತು ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಜೊತೆಗೆ ಕುಲದೀಪ್ ಯಾದವ್ ಕೂಡಾ ಸ್ಥಾನ ಪಡೆದಿದ್ದಾರೆ. ಹೀಗಾಗಿ ಆಕಾಶ್ ದೀಪ್ ತಂಡದಿಂದ ಹೊರಗುಳಿಯಬೇಕಾಗಿದೆ.