ಭಾರತ ಮೊದಲ ಇನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ನ್ಯೂಜಿಲೆಂಡ್ 402 ರನ್ ಗಳಿಗೆ ಆಲೌಟ್ ಆಗುವ ಮೂಲಕ 356 ರನ್ ಗಳ ಬೃಹತ್ ಮುನ್ನಡೆ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದೆ. ಹಿನ್ನಡೆ ದಾಟಲು ಇನ್ನೂ 174 ರನ್ ಗಳಿಸಬೇಕಿದೆ.
ಆದರೆ ಸಮಾಧಾನಕರ ಸಂಗತಿಯೆಂದರೆ ಮೊದಲ ಇನಿಂಗ್ಸ್ ನಲ್ಲಿ ತರಗಲೆಯಂತೆ ಉದುರಿದ್ದ ಟೀಂ ಇಂಡಿಯಾ ಅಗ್ರ ಕ್ರಮಾಂಕ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಆಟವಾಡಿದೆ. ಆರಂಭಿಕ ಯಶಸ್ವಿ ಜೈಸ್ವಾಲ್ 35 ರನ್ ಗಳಿಗೆ ಮೊದಲನೆಯವರಾಗಿ ಔಟಾದರು. ಆದರೆ ಮೊದಲ ವಿಕೆಟ್ ಗೆ ರೋಹಿತ್ ಶರ್ಮಾ ಜೊತೆ 72 ರನ್ ಗಳ ಜೊತೆಯಾಟವಾಡಿದರು. ಇನ್ನೊಂದೆಡೆ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ 52 ರನ್ ಗಳಿಸಿದ್ದಾಗ ಬೌಲ್ಡ್ ಔಟ್ ಆಗಿ ನಿರಾಸೆ ಅನುಭವಿಸಿದರು.