IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

Krishnaveni K

ಮಂಗಳವಾರ, 14 ಅಕ್ಟೋಬರ್ 2025 (10:47 IST)
ದೆಹಲಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ವೆಸ್ಟ್ ಇಂಡೀಸ್ ನೀಡಿದ 121 ರನ್ ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಇಂದು 3 ವಿಕೆಟ್ ಕಳೆದುಕೊಂಡು 124 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಕೊನೆಯವರೆಗೂ ಅಜೇಯರಾಗುಳಿದ ಓಪನರ್ ಕೆಎಲ್ ರಾಹುಲ್ 58 ರನ್ ಗಳಿಸಿದರು. ನಿನ್ನೆ ಅಜೇಯರಾಗುಳಿದಿದ್ದ ಸಾಯಿ ಸುದರ್ಶನ್ ಇಂದು 39 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಶುಭಮನ್ ಗಿಲ್ ಕೂಡಾ 13 ರನ್ ಗೆ ವಿಕೆಟ್ ಒಪ್ಪಿಸಿ ಹೋದರು. ಆದರೆ ರಾಹುಲ್ ಮತ್ತು ಧ್ರುವ ಜ್ಯುರೆಲ್ (6) ಯಾವುದೇ ಅಪಾಯವಾಗದಂತೆ ನೋಡಿಕೊಂಡರು.

ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತು. ಭಾರತ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ ನಲ್ಲಿ 248 ಕ್ಕೆ ಆಲೌಟ್ ಆಗಿ ಫಾಲೋ ಆನ್ ಗೊಳಗಾಗದರೂ ದ್ವಿತೀಯ ಇನಿಂಗ್ಸ್ ನಲ್ಲಿ ದಿಟ್ಟ ಹೋರಾಟ ನಡೆಸಿತ್ತು. ಪರಿಣಾಮ 390 ರನ್ ಗಳಿಸಿ ಆಲೌಟ್ ಆಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಸತತವಾಗಿ 10 ನೇ ಬಾರಿಗೆ ಟೆಸ್ಟ್ ಸರಣಿಯಲ್ಲಿ ಗೆದ್ದು ಭಾರತ ದಾಖಲೆ ಮಾಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ