ಭಾರತ-ಆಸೀಸ್ ಟೆಸ್ಟ್: ಆರಂಭಿಕ ಪತನದ ಬಳಿಕ ಚೇತರಿಸಿಕೊಂಡ ಆಸ್ಟ್ರೇಲಿಯಾ

ಶನಿವಾರ, 26 ಡಿಸೆಂಬರ್ 2020 (09:04 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಪತನದ ಬಳಿಕ ಆಸ್ಟ್ರೇಲಿಯಾ ಚೇತರಿಸಿಕೊಂಡಿದೆ.


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ. 30 ರನ್ ಗಳಿಸಿದ ಮ್ಯಾಥ್ಯೂ ವೇಡ್ ಮತ್ತು 43 ರನ್ ಗಳಿಸಿ ಲಬುಶೇನ್ ಎಚ್ಚರಿಕೆಯ ಆಟವಾಡುತ್ತಿದ್ದಾರೆ. ಭಾರತದ ಪರ ರವಿಚಂದ್ರನ್ ಅಶ್ವಿನ್  ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ