ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯಕ್ಕೆ ಭಾರತ, ಆಸ್ಟ್ರೇಲಿಯಾ ಪ್ರಧಾನಿಗಳು

ಗುರುವಾರ, 9 ಮಾರ್ಚ್ 2023 (08:40 IST)
Photo Courtesy: Twitter
ಅಹಮ್ಮದಾಬಾದ್: ಗುಜರಾತ್ ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಉಭಯ ದೇಶಗಳ ಪ್ರಧಾನಿಗಳು ಆಗಮಿಸಲಿದ್ದಾರೆ.

ಇಂದು ಮೊದಲ ದಿನ ಭಾರತದ ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥನಿ ಆಲ್ಬೆನ್ಸೆ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಇದಕ್ಕಾಗಿ ಆಸೀಸ್ ಪ್ರಧಾನಿ ಆಲ್ಬೆನ್ಸೆ ನಿನ್ನೆಯೇ ಭಾರತಕ್ಕೆ ಬಂದಿಳಿದಿದ್ದಾರೆ.

ನಾಲ್ಕು ದಿನಗಳ ಕಾಲ ಆಸೀಸ್ ಪ್ರಧಾನಿ ಭಾರತ ಪ್ರವಾಸದಲ್ಲಿದ್ದು, ಇಂದು ಸೌಹಾರ್ದಯುತವಾಗಿ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. ಇದಕ್ಕಾಗಿ ಮೈದಾನಕ್ಕೆ ಎಸ್ ಪಿಜೆ ಭದ್ರತೆ ಒದಗಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ