ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಇಂದು: ರೋಹಿತ್ ಕಮ್ ಬ್ಯಾಕ್

ಭಾನುವಾರ, 19 ಮಾರ್ಚ್ 2023 (08:50 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ವಿಶಾಖಪಟ್ಟಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.

ಮೊದಲ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಭಾರತೀಯ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಅಗ್ರ ಕ್ರಮಾಂಕದ ಬ್ಯಾಟಿಗರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿರಲಿಲ್ಲ. ಆದರೆ ಟೆಸ್ಟ್ ನಲ್ಲಿ ಫಾರ್ಮ್ ನಲ್ಲಿರದ ಕೆಎಲ್ ರಾಹುಲ್ ಮಧ‍್ಯಮ ಕ್ರಮಾಂಕದಲ್ಲಿ ಜವಾಬ್ಧಾರಿಯುತ ಆಟವಾಡಿದ್ದರು.

ಈ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಹೀಗಾಗಿ ಇಶಾನ್ ಕಿಶನ್  ಸ್ಥಾನ ಬಿಟ್ಟುಕೊಡಬೇಕಾಗಬಹುದು. ಉಳಿದಂತೆ ಕುಲದೀಪ್ ಬದಲಿಗೆ ಅಕ್ಸರ್ ಪಟೇಲ್ ಗೆ ಅವಕಾಶ ಸಿಕ್ಕರೂ ಅಚ್ಚರಿಯಿಲ್ಲ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ