ಭಾರತ-ಆಸ್ಟ್ರೇಲಿಯಾ ಏಕದಿನ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

ಭಾನುವಾರ, 19 ಮಾರ್ಚ್ 2023 (13:20 IST)
Photo Courtesy: Twitter
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಏಕದಿನ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಆಸೀಸ್ ಗೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ. ಗಾಯಗೊಂಡಿರುವ ಗ್ಲೆನ್ ಮ್ಯಾಕ್ಸ್ ವೆಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ನಥನ್ ಎಲಿಸ್ ಮತ್ತು ಇಂಗ್ಲಿಸ್ ಸ್ಥಾನಕ್ಕೆ ಅಲೆಕ್ಸ್ ಕ್ಯಾರೀ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇತ್ತ ಭಾರತ ತಂಡವೂ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಶ್ರಾದ್ಧೂಲ್ ಠಾಕೂರ್ ಬದಲಿಗೆ ಅಕ್ಸರ್ ಪಟೇಲ್ ಸ್ಥಾನ ಪಡೆದಿದ್ದಾರೆ. ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡಿದ್ದರಿಂದ ಇಶಾನ್ ಕಿಶನ್ ಹೊರಗುಳಿಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ