ಭಾರತ-ಆಸ್ಟ್ರೇಲಿಯಾ ಮಹಿಳಾ ಏಕದಿನ: ಸಿಡಿದ ಭಾರತೀಯರು

ಶುಕ್ರವಾರ, 24 ಸೆಪ್ಟಂಬರ್ 2021 (11:22 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ನಡೆಯುತ್ತಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಭಾರತದ ವನಿತೆಯರು ಸ್ಪೋಟಕ ಆರಂಭ ನೀಡಿದ್ದು, ಇತ್ತೀಚೆಗಿನ ವರದಿ ಬಂದಾಗ 9 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 65 ರನ್ ಗಳಿಸಿದ್ದಾರೆ. ಸ್ಮೃತಿ ಮಂಥನಾ 34 ಎಸೆತಗಳಲ್ಲಿ 41 ಮತ್ತು ಶಫಾಲಿ ವರ್ಮ 20 ಎಸೆತಗಳಲ್ಲಿ 17 ರನ್ ಗಳಿಸಿ ಆಡುತ್ತಿದ್ದಾರೆ.

ಮೊದಲ ಪಂದ್ಯ ಸೋತಿದ್ದ ಮಿಥಾಲಿ ರಾಜ್ ನೇತೃತ್ವದ ಭಾರತೀಯ ಪಡೆ ಇಂದು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಇಂದು ಗೆದ್ದರೆ ಸರಣಿ ಸಮಬಲವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ