ಭಾರತ-ಆಸ್ಟ್ರೇಲಿಯಾ ಮಹಿಳೆಯರ ಟೆಸ್ಟ್: ಶತಕ ವಂಚಿತರಾದ ಸ್ಮೃತಿ ಮಂಧನ

ಶುಕ್ರವಾರ, 22 ಡಿಸೆಂಬರ್ 2023 (11:51 IST)
Photo Courtesy: Twitter
ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳೆಯರ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ.

ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 219 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ದ್ವಿತೀಯ ದಿನ ಭೋಜನ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ 3  ವಿಕೆಟ್ ನಷ್ಟಕ್ಕೆ 193 ರನ ಗಳಿಸಿದೆ.

ಭಾರತದ ಪರ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನ ಭರ್ಜರಿ ಆಟವಾಡಿದ್ದು 74 ರನ್ ಗಳಿಸಿ ಔಟಾದರು. ಮಂಧನ ಇಂದು ಶತಕ ಗಳಿಸುತ್ತಾರೆ ಎಂದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ದುರದೃಷ್ಟವಶಾತ್ ರನೌಟ್ ಆಗಿ ನಿರಾಸೆ ಅನುಭವಿಸಿದರು. ಇನ್ನೊಬ್ಬ ಆರಂಭಿಕ ಆಟಗಾರ್ತಿ ಶಫಾಲಿ ವರ್ಮ 40 ರನ್ ಗಳಿಸಿದರು.

ಸ್ನೇಹ ರಾಣಾ 9 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ ಇದೀಗ ಕ್ರೀಸ್ ನಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ರಿಚಾ ಘೋಷ್ ಮತ್ತು ಜೆಮಿಮಾ ರೊಡ್ರಿಗಸ್ ತಲಾ 24 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರತ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ26 ರನ್ ಬೇಕಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ