ಭಾರತ-ಆಸ್ಟ್ರೇಲಿಯಾ ಮಹಿಳೆಯರ ಐತಿಹಾಸಿಕ ಟೆಸ್ಟ್ ಗೆ ಮಳೆ ಅಡ್ಡಿ

ಗುರುವಾರ, 30 ಸೆಪ್ಟಂಬರ್ 2021 (16:57 IST)
ಕ್ವೀನ್ಸ್ ಲ್ಯಾಂಡ್: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳೆಯರ ನಡುವೆ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.


ಆದರೆ ಇದಕ್ಕೂ ಮೊದಲು ಟಾಸ್ ಗೆದ್ದ ಆಸೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಭಾರತೀಯ ವನಿತೆಯರು ದಿಟ್ಟ ಹೋರಾಟ ನಡೆಸುತ್ತಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದ್ದಾರೆ. ಸ್ಮೃತಿ ಮಂಥನಾ 80 ರನ್ ಮತ್ತು ಪೂನಂ ಯಾದವ್ 16 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಶಫಾಲಿ ವರ್ಮ 34 ರನ್ ಗಳಿಗೆ ಔಟಾದರು. ಈ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕ ಮೂಲದ ಸ್ಪಿನ್ನರ್ ರಾಜೇಶ್ವರಿ ಗಾಯಕ್ ವಾಡ್ ಕೂಡಾ ಆಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ