ಭಾರತ-ಬಾಂಗ್ಲಾದೇಶ ಅಂತಿಮ ಟಿ20 ನಾಳೆ

ಶನಿವಾರ, 9 ನವೆಂಬರ್ 2019 (09:35 IST)
ನಾಗ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ನಾಳೆ ನಾಗ್ಪುರದಲ್ಲಿ ನಡೆಯಲಿದೆ.


ಈಗಾಗಲೇ ಎರಡೂ ತಂಡಗಳೂ ಸರಣಿಯಲ್ಲಿ ತಲಾ 1 ಗೆಲುವಿನೊಂದಿಗೆ ಸಮಬಲ ಸಾಧಿಸಿರುವುದರಿಂದ ನಾಳೆಯ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಆದರೆ ಇದರ ನಡುವೆ ಮಹಾರಾಷ್ಟ್ರದಲ್ಲಿ ಮಳೆಯ ಭೀತಿಯೂ ಇರುವುದರಿಂದ ನಾಳೆಯ ಪಂದ್ಯಕ್ಕೆ ವರುಣ ಅಡ್ಡಿಯಾಗದಿದ್ದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ.

ಈ ಪಂದ್ಯಕ್ಕೆ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ‍್ಯತೆಯಿಲ್ಲ. ಗೆಲುವಿನ ತಂಡವನ್ನೇ ಮುಂದುವರಿಸುವ ಸಾಧ್ಯತೆಯಿದೆ. ಪಂದ್ಯ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ