ಭಾರತ-ಇಂಗ್ಲೆಂಡ್ ಮುಂದಿನ ಪಂದ್ಯ ಯಾವಾಗ? ಎಲ್ಲಿ? ಇಲ್ಲಿದೆ ಮಾಹಿತಿ

Krishnaveni K

ಸೋಮವಾರ, 19 ಫೆಬ್ರವರಿ 2024 (09:36 IST)
Photo Courtesy: Twitter
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಇನ್ನು ಎರಡು ಪಂದ್ಯಗಳು ಬಾಕಿಯಿವೆ.

ರಾಜ್ ಕೋಟ್ ನಲ್ಲಿ ನಡೆದಿದ್ದ ಮೂರನೇ ಪಂದ್ಯವನ್ನು ಟೀಂ ಇಂಡಿಯಾ 434 ರನ್ ಗಳ ಅಂತರದಿಂದ ಗೆಲುವು ದಾಖಲಿಸಿತ್ತು. ಇದರೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಸರಣಿಯ ಉಳಿದ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯವನ್ನು ಗೆದ್ದರೂ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಳ್ಳಲಿದೆ.

ಮುಂದಿನ ಪಂದ್ಯ ಸ್ಥಳ, ಸಮಯ
ಸರಣಿಯ ಮುಂದಿನ ಪಂದ್ಯ ಮಾಜಿ ನಾಯಕ ಧೋನಿ ತವರು ರಾಂಚಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಫೆಬ್ರವರಿ 23 ರಿಂದ 27 ರವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಇನ್ನೂ ಕೇವಲ ನಾಲ್ಕು ದಿನಗಳು ಬಾಕಿಯಿವೆ.

ಗಾಯಾಳು ಕೆಎಲ್ ರಾಹುಲ್ ವಾಪಸ್?
ಮೊದಲ ಪಂದ್ಯದಲ್ಲಿ ಆಡಿದ್ದ ಪ್ರಮುಖ ಬ್ಯಾಟಿಗ ಕೆಎಲ್ ರಾಹುಲ್ ತೊಡೆ ನೋವಿನಿಂದಾಗಿ ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಸರಣಿಯ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ರಾಹುಲ್ ತಂಡಕ್ಕೆ ಆಯ್ಕೆಯಾಗಿದ್ದರೂ ಫಿಟ್ನೆಸ್ ಮರಳಿ ಪಡೆಯದೇ ಇದ್ದಿದ್ದರಿಂದ ಮೂರನೇ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ರಾಹುಲ್ ಫಿಟ್ನೆಸ್ ಸಾಬೀತುಪಡಿಸಿದರೆ ಮೂರನೇ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ‍್ಯತೆಯಿದೆ. ಅವರು ಕಮ್ ಬ್ಯಾಕ್ ಮಾಡಿದರೆ ಸಹಜವಾಗಿ ಕಳಪೆ ಪ್ರದರ್ಶನ ನೀಡಿರುವ ರಜತ್ ಪಟಿದಾರ್ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಒಂದು ವೇಳೆ ರಾಹುಲ್ ಕೂಡಾ ಕಮ್ ಬ್ಯಾಕ್ ಮಾಡಿದರೆ ತಂಡ ಇನ್ನಷ್ಟು ಸ್ಟ್ರಾಂಗ್ ಆಗಲಿದೆ. ಈಗಾಗಲೇ ಚೊಚ್ಚಲ ಅವಕಾಶ ಪಡೆದ ಸರ್ಫರಾಜ್ ಖಾನ್ ಎರಡೂ ಇನಿಂಗ್ಸ್ ಗಳಲ್ಲಿ ಅರ್ಧಶತಕ ಗಳಿಸಿ ತಮ್ಮ ಸ್ಥಾನ ಭದ್ರಪಡಿಸಿದ್ದಾರೆ. ಆದರೆ ರಜತ್ ಪಟಿದಾರ್ ಗೆ ಕಳೆದ ಎರಡು ಪಂದ್ಯಗಳಲ್ಲಿ ಅವಕಾಶ ಸಿಕ್ಕಿಯೂ ರನ್ ಗಳಿಸಲು ವಿಫಲರಾಗಿದ್ದರು. ಹೀಗಾಗಿ ಮುಂದಿನ ಪಂದ್ಯಕ್ಕೆ ಅವರು ಔಟ್ ಆಗುವುದು ಗ್ಯಾರಂಟಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ