ಭಾರತ-ಇಂಗ್ಲೆಂಡ್ ಕ್ರಿಕೆಟ್: ದ್ವಿತೀಯ ಏಕದಿನ ಇಂದು

ಶುಕ್ರವಾರ, 26 ಮಾರ್ಚ್ 2021 (09:06 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ದ್ವಿತೀಯ ಪಂದ್ಯ ಇಂದು ಹೊನಲು ಬೆಳಕಿನಲ್ಲಿ ನಡೆಯಲಿದೆ.

 

ಪುಣೆಯಲ್ಲಿಯೇ ಎಲ್ಲಾ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಭಾರತ ಭರ್ಜರಿಯಾಗಿ ಜಯಗಳಿಸಿ ಸರಣಿಯಲ್ಲಿ ಮುನ್ನಡೆಯಲ್ಲಿದೆ. ಇಂದಿನ ಪಂದ್ಯವನ್ನು ಭಾರತ ಗೆದ್ದರೆ ಸರಣಿ ಕೈವಶವಾಗಲಿದೆ.

ಆದರೆ ಭಾರತ ತಂಡಕ್ಕೆ ಗಾಯಾಳುಗಳ ಚಿಂತೆ ಕಾಡಿದೆ. ರೋಹಿತ್ ಶರ್ಮಾ ಫಿಟ್ ಆಗುವ ನಿರೀಕ್ಷೆಯಿದ್ದರೂ, ಶ್ರೇಯಸ್ ಐಯರ್ ಸರಣಿಯಿಂದ ಹೊರಬಿದ್ದಿರುವುದರಿಂದ ಅವರ ಸ್ಥಾನಕ್ಕೆ ಆಯ್ಕೆಯಾಗುವವರು ಯಾರು ಎಂಬ ಪ್ರಶ್ನೆ ಮೂಡಿದೆ. ಸೂರ್ಯಕುಮಾರ್ ಯಾದವ್ ಆಯ್ಕೆ ಬಹುತೇಕ ಖಚಿತವಾಗಿದೆ. ಉಳಿದಂತೆ ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ ಸ್ಥಾನಕ್ಕೆ ಯಜುವೇಂದ್ರ ಚಾಹಲ್ ಪುನರಾಗಮನವಾಗಬಹುದು. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ