ಬೆಳ್ಳಂ ಬೆಳಿಗ್ಗೆ ಭಾರತ-ನ್ಯೂಜಿಲೆಂಡ್ ಮ್ಯಾಚ್ ನೋಡಲು ಸಿದ್ಧರಾಗಿ
ರೋಹಿತ್ ಶರ್ಮಾ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಅವರ ಸ್ಥಾನದಲ್ಲಿ ಯುವ ಕ್ರಿಕೆಟಿಗ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಟೀಂ ಇಂಡಿಯಾದಲ್ಲಿ ಸ್ಥಾನ ಗಟ್ಟಿಗೊಳಿಸಲು ಯುವ ಆಟಗಾರನಿಗೆ ಉತ್ತಮ ಅವಕಾಶ ಸಿಗಲಿದೆ. ಮತ್ತೆ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೇ ಮುಂದವರಿಯಲಿದ್ದು, ಮಧ್ಯಮ ಕ್ರಮಾಂಕಕ್ಕೆ ಆಸ್ತಿಯಾಗಲಿದ್ದಾರೆ. ಹಾಗಿದ್ದರೂ ರೋಹಿತ್ ಅನುಪಸ್ಥಿತಿಯಲ್ಲಿ ಕೊಹ್ಲಿ ಮತ್ತು ರಾಹುಲ್ ಮೇಲೆ ಹೆಚ್ಚಿನ ಹೊಣೆಗಾರಿಕೆ ಬೀಳಲಿದೆ. ಇದನ್ನು ಅವರು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.