ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಕಾಟ
ಇಂದೂ ಕೂಡಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಮಳೆ ಬರುವ ಮೊದಲು 4.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಸಿತ್ತು. ಶುಬ್ನಂ ಗಿಲ್ 19, ಶಿಖರ್ ಧವನ್ 2 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಬದಲು ದೀಪಕ್ ಹೂಡಾಗೆ ಅವಕಾಶ ನೀಡಲಾಗಿದೆ. ಶ್ರಾದ್ಧೂಲ್ ಠಾಕೂರ್ ಬದಲಿಗೆ ದೀಪಕ್ ಚಹರ್ ಗೆ ಸ್ಥಾನ ನೀಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆಯಿಲ್ಲ.