ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಟಿ20: ತಿರುಗಿ ಬೀಳುತ್ತಾ ಟೀಂ ಇಂಡಿಯಾ?
ಮೊದಲ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಪಡೆ ವೀರೋಚಿತವಾಗಿ ಸೋತಿತ್ತು. ಇದೀಗ ಎರಡನೇ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ಕಮ್ ಬ್ಯಾಕ್ ಮಾಡುವ ಒತ್ತಡದಲ್ಲಿದೆ.
ಮೊದಲ ಪಂದ್ಯದಲ್ಲಿ ವಿಂಡೀಸ್ ನ ನಿಕಲಸ್ ಪೂರನ್, ಬ್ರೆಂಡನ್ ಕಿಂಗ್, ರೊವ್ಮಾನ್ ಪೊವೆಲ್ ನಂತಹ ಹಿಟ್ಟರ್ ಗಳ ಹೊಡೆಬಡಿಯ ಆಟದ ಹೊರತಾಗಿಯೂ ಟೀಂ ಇಂಡಿಯಾ ಯುವ ಬೌಲರ್ ಗಳು ಎದುರಾಳಿಗಳನ್ನು ನಿಯಂತ್ರಿಸಲು ಯಶಸ್ವಿಯಾಗಿದ್ದರು. ಆದರೆ ಬ್ಯಾಟಿಗರಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಅಗ್ರ ಕ್ರಮಾಂಕದ ಬ್ಯಾಟಿಗರು ಖ್ಯಾತಿಗೆ ತಕ್ಕ ಆಟವಾಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.