ಭಾರತ-ವಿಂಡೀಸ್ ಟಿ20: ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು
ಗುರುವಾರ, 17 ಫೆಬ್ರವರಿ 2022 (08:40 IST)
ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ನಿಕಲಸ್ ಪೂರನ್ 61, ನಾಯಕ ಪೊಲ್ಲಾರ್ಡ್ 24 ರನ್ ಹಾಗೂ ಮೇಯರ್ಸ್ 31 ರನ್ ಗಳಿಸಿ ಮಿಂಚಿದರು. ಭಾರತದ ಪರ ರವಿ ಬಿಷ್ಣೋಯ್, ಹರ್ಷಲ್ ಪಟೇಲ್ ತಲಾ 2, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯಜುವೇಂದ್ರ ಚಾಹಲ್ ತಲಾ 1 ವಿಕೆಟ್ ಕಬಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ರೋಹಿತ್-ಇಶಾನ್ ಕಿಶನ್ ಭರ್ಜರಿ ಆರಂಭ ಒದಗಿಸಿದರು. ಅದರಲ್ಲೂ ರೋಹಿತ್ ಶರ್ಮಾ ಹೊಡೆಬಡಿಯ ಆಟವಾಡಿ 19 ಎಸೆತಗಳಲ್ಲಿ 40 ರನ್ ಗಳಿಸಿದರು. ಇಶಾನ್ ಕಿಶನ್ 35 ರನ್ ಗಳಿಸಿದರು. ಆದರೆ ಕೊಹ್ಲಿ ಮತ್ತೆ ವಿಫಲರಾಗಿ 17 ರನ್ ಗೆ ವಿಕೆಟ್ ಒಪ್ಪಿಸಿದರು. ರಿಷಬ್ ಪಂತ್ ಕೂಡಾ ಹೆಚ್ಚು ಹೊತ್ತು ಉಳಿಯಲಿಲ್ಲ. ಆದರೆ ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರೆ, ವೆಂಕಟೇಶ್ ಅಯ್ಯರ್ 13 ಎಸೆತಗಳಲ್ಲಿ 24 ರನ್ ಗಳಿಸಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು. ಅಂತಿಮವಾಗಿ ಭಾರತ 18.5 ಓವರ್ ಗಳಲ್ಲಿ 4 ವಿಕೆಡಟ್ ನಷ್ಟಕ್ಕೆ 162 ರನ್ ಗಳಿಸಿ ಗೆಲುವು ಕಂಡಿತು.