ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಇಂದು ಬಾರ್ಬಡೋಸ್ ಎದುರಾಳಿ: ಗೆದ್ದರೆ ಸೆಮಿಫೈನಲ್ ಹಾದಿ ಸುಗಮ
ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಸೋತು ಕಳೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡಕ್ಕೆ ಇಂದಿನ ಪಂದ್ಯ ಗೆದ್ದರೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.
ಈಗಾಗಲೇ ಆಸ್ಟ್ರೇಲಿಯಾ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ. ಬಾರ್ಬಡೋಸ್ ದುರ್ಬಲ ತಂಡವಾಗಿದ್ದು ಭಾರತ ತಂಡ ಈ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಆಗಿದೆ. ಹೀಗಾಗಿ ಹರ್ಮನ್ ಪ್ರೀತ್ ಮತ್ತೆ ವಿಜೃಂಭಿಸುವ ವಿಶ್ವಾಸದಲ್ಲಿದೆ. ಈ ಪಂದ್ಯ ಇಂದು ರಾತ್ರಿ 10.30 ಕ್ಕೆ ನಡೆಯಲಿದೆ.