ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಬೂಮ್ರಾ ಭಾಜನರಾಗಿದ್ದಾರೆ. ಒಟ್ಟಾರೆಯಾಗಿ ಜಸ್‌ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಗಳಿಸಿದ ಭಾರತದ 12ನೇ ಬೌಲರ್ ಎನಿಸಿದ್ದಾರೆ.
200 ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಬೂಮ್ರಾ ಅತ್ಯುತ್ತಮ ಬೌಲಿಂಗ್ ಸರಾಸರಿಯನ್ನು (19.56) ಕಾಪಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್‌ಇಂಡೀಸ್‌ನ ಮಾರ್ಷಲ್ (20.94) ದಾಖಲೆಯನ್ನು ಮೀರಿಸಿದ್ದಾರೆ.