ಟೆಸ್ಟ್ ಕ್ರಿಕೆಟ್‌ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿದಾಯ ಸಾಧ್ಯತೆ
ಐದು ಟೆಸ್ಟ್ ಪಂದ್ಯಗಳ ಕೊನೆಯ ಪಂದ್ಯ ಸಿಡ್ನಿಯಲ್ಲಿ ನಡೆಯಲಿದ್ದು ಆ ಬಳಿಕ ರೋಹಿತ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂದು ವರದಿಯಾಗಿದೆ. ಈ ಟೂರ್ನಿಯಲ್ಲಿ ಭಾರತದ ತಂಡದ ಹೀನಾಯ ಪ್ರದರ್ಶನ ಟೀಕೆಗೆ ಗುರಿಯಾಗಿದೆ. ಅದರ ಬೆನ್ನಲ್ಲೆ ರೋಹಿತ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.