ಕಾಮನ್ ವೆಲ್ತ್ ಗೇಮ್ಸ್ ಕ್ರಿಕೆಟ್: ಭಾರತ ವನಿತೆಯರಿಗೆ ಪಾಕ್ ಸವಾಲು
ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಕ್ಷಣದಲ್ಲಿ ಸೋತಿದ್ದ ಹರ್ಮನ್ ಪ್ರೀತ್ ಕೌರ್ ಪಡೆ ಇದೀಗ ಇಂದಿನ ಪಂದ್ಯದಲ್ಲಿ ಗೆಲ್ಲುವ ಅನಿವಾರ್ಯತೆಯಲ್ಲಿದೆ.
ಅಂಕಿ ಅಂಶಗಳ ಪ್ರಕಾರ ಭಾರತ ತಂಡ ಪಾಕ್ ವಿರುದ್ಧ ಮೇಲುಗೈ ಹೊಂದಿದೆ. ಹೀಗಾಗಿ ಇಂದಿನ ಪಂದ್ಯವನ್ನು ಹರ್ಮನ್ ಪಡೆ ಗೆಲ್ಲಬಹುದು ಎಂಬ ವಿಶ್ವಾಸವಿದೆ.