ಟೀಮ್ ಇಂಡಿಯಾಗೆ ಆರಂಭಿಕ ಆಘಾತ..!

ಗುರುವಾರ, 1 ಜುಲೈ 2021 (09:33 IST)
ಇಂಗ್ಲೆಂಡ್: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಸೋತಿರುವ ಟೀಮ್ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದೆ. ಆದರೆ ಈ ಸರಣಿಗೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಗಾಗಯೊಂಡಿದ್ದು ಇಂಗ್ಲೆಂಡ್ ವಿರುದ್ದ ಆಡಲಾಗುವುದಿಲ್ಲ ಎನ್ನಲಾಗಿದೆ.
 

ಗಿಲ್ ಅವರ ಮಂಡಿರಜ್ಜು ಭಾಗಕ್ಕೆ ಗಾಯವಾಗಿದ್ದು, ಹೀಗಾಗಿ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿ ಆರಂಭವಾಗಲು ಇನ್ನೂ ಒಂದು ತಿಂಗಳ ಸಮಯವಕಾಶವಿದೆ. ಅದರ ನಡುವೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಕೆಲ ಮೂಲಗಳ ಪ್ರಕಾರ ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಗಿಲ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಮತ್ತೋರ್ವ ಆರಂಭಿಕ ಕಣಕ್ಕಿಳಿಯಲಿದ್ದಾರೆ. ಹೆಚ್ಚುವರಿ ಆರಂಭಿಕ ಆಟಗಾರರಾಗಿ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಪ್ರಸ್ತುತ ತಂಡದಲ್ಲಿದ್ದು, ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಇಂಗ್ಲೆಂಡ್ ವಿರುದ್ದ ಓಪನರ್ ಸ್ಥಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದಾಗ್ಯೂ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ವಿಫಲರಾದ ಕಾರಣ ಅವರಿಗೆ ಇಂಗ್ಲೆಂಡ್ ವಿರುದ್ದ ಆಡುವ ಅವಕಾಶ ದೊರೆಯುವುದು ಅನುಮಾನ ಎನ್ನಲಾಗಿತ್ತು. ಇದೀಗ ಗಾಯಗೊಂಡ ಕಾರಣ ಪ್ಲೇಯಿಂಗ್ ಇಲೆವೆನ್ನಿಂದ ಗಿಲ್ ಹೊರಬೀಳುವುದು ಖಚಿತವಾದಂತಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಬಳಿಕ ಟೀಮ್ ಇಂಡಿಯಾ ಆಟಗಾರಿಗೆ ವಿರಾಮ ನೀಡಲಾಗಿದ್ದು, ಜುಲೈ 14 ರ ಬಳಿಕ ಇಂಟ್ರಾ-ಸ್ಕ್ವಾಡ್ ಪಂದ್ಯಗಳು ಆರಂಭವಾಗಲಿದೆ. ಆಗಸ್ಟ್ 4 ರಿಂದ ಇಂಗ್ಲೆಂಡ್ ವಿರುದ್ದ ಐದು ಪಂದ್ಯಗಳ ಸರಣಿ ಆರಂಭವಾಗಲಿದ್ದು, ಈ ಸರಣಿ ಗೆಲುವಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸೋಲಿನ ನೋವನ್ನು ಮರೆಯುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ