ಐಪಿಎಲ್ 2022 ರ ಮೆಗಾ ಹರಾಜು ಪ್ರಕ್ರಿಯೆ ಯಾವಾಗ?

ಬುಧವಾರ, 8 ಡಿಸೆಂಬರ್ 2021 (08:55 IST)
ಮುಂಬೈ: ಐಪಿಎಲ್ 2022 ಕ್ಕೆ ಆಟಗಾರರ ಮೆಗಾ ಹರಾಜು ನಡೆಯುವುದು ಖಚಿತ. ಆದರೆ ಯಾವ ದಿನ ಹರಾಜು ಪ್ರಕ್ರಿಯೆ ನಡೆಯಲಿದೆ ಎನ್ನುವುದಕ್ಕೆ ಬಿಸಿಸಿಐ ಮೂಲಗಳಿಂದ ಸಂಭಾವ್ಯ ದಿನಾಂಕದ ಬಗ್ಗೆ ಸುಳಿವು ಸಿಕ್ಕಿದೆ.

ಮುಂದಿನ ಜನವರಿ ಎರಡನೇ ವಾರದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ. ಈವರೆಗೆ ಜನವರಿ ಮೊದಲ ವಾರದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ ಈಗ ಒಂದು ವಾರ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ.

ಹರಾಜಿಗೆ ಮೊದಲು ಹೊಸದಾಗಿ ಸೇರ್ಪಡೆಯಾಗಿರುವ ಎರಡು ತಂಡಗಳಿಗೆ 6 ಆಟಗಾರರನ್ನು ಆಯ್ಕೆ ಮಾಡಲು ಡಿಸೆಂಬರ್ 31 ರವರೆಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಹೀಗಾಗಿ ಅದರ ಬಳಿಕವಷ್ಟೇ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ