ಐಪಿಎಲ್ 2023: ಚೆನ್ನೈಗೆ ಕೆಕೆಆರ್ ಎದುರಾಳಿ
ಧೋನಿ ಪಡೆ ಈಗಾಗಲೇ 12 ಪಂದ್ಯಗಳ ಪೈಕಿ 7 ರಲ್ಲಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿರುವ ಧೋನಿ ಪಡೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.
ಅತ್ತ ಕೆಕೆಆರ್ 12 ಪಂದ್ಯಗಳಿಂದ 5 ರಲ್ಲಿ ಗೆಲುವು ಸಾಧಿಸಿದೆ. ಸತತ ಎರಡು ಗೆಲುವುಗಳ ನಂತರ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಕೆಕೆಆರ್ ಬ್ಯಾಟಿಂಗ್ ಚೆನ್ನೈ ಎದುರು ತಿರುಗಿಬೀಳುವ ಸಾಮರ್ಥ್ಯ ಹೊಂದಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.