ಐಪಿಎಲ್ 2023: ಹೈದರಾಬಾದ್ ವಿರುದ್ಧ ಗೆದ್ದ ಧೋನಿ ಪಡೆ

ಶನಿವಾರ, 22 ಏಪ್ರಿಲ್ 2023 (06:20 IST)
Photo Courtesy: Twitter
ಚೆನ್ನೈ: ಐಪಿಎಲ್ 2023 ರಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ಗೆಲುವು ತನ್ನದಾಗಿಸಿಕೊಂಡಿದೆ. ಹೈದರಾಬಾದ್ ವಿರುದ್ಧ ನಡೆದ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಶಕ್ತವಾಯಿತು. ಸಾಕಷ್ಟು ರನ್ ಗಳಿಸಲು ವಿಫಲವಾಗಿದ್ದು ಹೈದರಾಬಾದ್ ಹಿನ್ನಡಗೆ ಕಾರಣವಾಯಿತು. ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ 18.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 35, ಡೆವನ್ ಕಾನ್ವೇ 77 ರನ್ ಸಿಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ