ಐಪಿಎಲ್ 2023: ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ಸವಾಲು
ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಸತತ ಎರಡು ಸೋಲುಗಳ ನಂತರ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಇದರೊಂದಿಗೆ ರೋಹಿತ್ ಪಡೆ 8 ಪಂದ್ಯಗಳಿಂದ 4 ಗೆಲುವು ಸಂಪಾದಿಸಿದೆ. ಈ ಪಂದ್ಯವನ್ನು ಗೆದ್ದರೆ ಮುಂಬೈ ಅಂಕಪಟ್ಟಿಯಲ್ಲಿ ಮೇಲೇರಲಿದೆ.
ಅತ್ತ ಶಿಖರ್ ಧವನ್ ನೇತೃತ್ವದ ಪಂಜಾಬ್ 9 ಪಂದ್ಯಗಳಿಂದ 5 ಗೆಲುವು ಸಂಪಾದಿಸಿದೆ. ಕಳೆದ ಪಂದ್ಯದಲ್ಲಿ ಗೆಲುವು ಪಂಜಾಬ್ ಆತ್ಮವಿಶ್ವಾಸ ಹೆಚ್ಚಿಸಿದೆ. ಈ ಪಂದ್ಯ ಸಂಜೆ 7.30 ಕ್ಕೆ ನಡೆಯುವುದು.