ಐಪಿಎಲ್ 2023: ಆರ್ ಸಿಬಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಯ್ತು
ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 226 ರನ್ ಗಳಿಸಿತು. ಕಾನ್ವೇ 83, ಶಿವಂ ದುಬೆ 52 ರನ್ ಗಳಿಸಿದರು. ಕಳೆದ ಪಂದ್ಯದಲ್ಲಿ ಹೀರೋ ಆಗಿದ್ದ ವಿಜಯ್ ಕುಮಾರ್ ವೈಶಾಖ್ ಈ ಪಂದ್ಯದಲ್ಲಿ 1 ವಿಕೆಟ್ ಕಿತ್ತರೂ 4 ಓವರ್ ಗಳಲ್ಲಿ 62 ರನ್ ನೀಡಿದರು!
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಬೆಂಗಳೂರು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಲಷ್ಟೇ ಶಕ್ತವಾಯಿತು. ರನ್ ಮೆಷಿನ್ ಕೊಹ್ಲಿ ಕೇವಲ 6 ರನ್ ಗಳಿಸಿ ಔಟಾದರು. ಆದರೆ ನಾಯಕ ಫಾ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ ವೆಲ್ ಜೊತೆಗೂಡಿ ಉತ್ತಮ ಇನಿಂಗ್ಸ್ ಆಡಿದರು. ಫಾ ಡು 62, ಮ್ಯಾಕ್ಸ್ ವೆಲ್ 76 ರನ್ ಸಿಡಿಸಿದರು. ಆದರೂ ಇವರಿಂದ ಪಂದ್ಯ ಗೆಲ್ಲಿಸಲಾಗಲಿಲ್ಲ. ಈ ಗೆಲುವಿನೊಂದಿಗೆ ಚೆನ್ನೈ ಅಂಕಪಟ್ಟಿಯಲ್ಲಿ 3 ನೇ ಸ್ಥಾನಕ್ಕೇರಿತು.