ಐಪಿಎಲ್ 2023: ಆರ್ ಸಿಬಿಗೆ ಇಂದು ರಾಜಸ್ಥಾನ್ ಸವಾಲು

ಭಾನುವಾರ, 14 ಮೇ 2023 (06:30 IST)
ಜೈಪುರ: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.
 

ಆರ್ ಸಿಬಿ ಈಗಾಗಲೇ ಟೂರ್ನಿಯಲ್ಲಿ 11 ಪಂದ್ಯಗಳಿಂದ ಕೇವಲ 5 ರಲ್ಲಿ ಮಾತ್ರ ಗೆಲುವು ಕಂಡಿದೆ. ಅಲ್ಲದೆ ಕಳೆದ ಎರಡು ಪಂದ್ಯಗಳಲ್ಲಿ ಸತತ ಎರಡು ಸೋಲು ಅನುಭವಿಸಿರುವ ಆರ್ ಸಿಬಿ ಒತ್ತಡದಲ್ಲಿದೆ. ಗ್ಲೆನ್ ಮ್ಯಾಕ್ಸ್ ವೆಲ್, ಫಾ ಡು ಪ್ಲೆಸಿಸ್, ಕೊಹ್ಲಿ ಮೇಲೆಯೇ ಹೆಚ್ಚು ನೆಚ್ಚಿಕೊಂಡಿರುವುದು ಹಿನ್ನಡೆಗೆ ಕಾರಣವಾಗಿದೆ.

ಇನ್ನು, ರಾಜಸ್ಥಾನ್ ರಾಯಲ್ಸ್ ಕಳೆದ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿತ್ತು. ಸ್ವತಃ ನಾಯಕ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. 12 ಪಂದ್ಯಗಳಿಂದ 6 ಗೆಲುವು ಕಂಡಿರುವ ರಾಜಸ್ಥಾನ್ ಟಾಪ್ 5 ರೊಳಗೆ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಿದೆ. ಈ ಪಂದ್ಯ ಅಪರಾಹ್ನ 3.30 ಕ್ಕೆ ನಡೆಯುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ