ಐಪಿಎಲ್ 2023 ಯಾವಾಗ ಶುರು? ಮೊದಲ ಪಂದ್ಯ ಯಾರ ನಡುವೆ?

ಬುಧವಾರ, 22 ಮಾರ್ಚ್ 2023 (09:20 IST)
Photo Courtesy: Twitter
ಮುಂಬೈ: ಐಪಿಎಲ್ 2023 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 31 ರಿಂದ ಐಪಿಎಲ್ 2023 ಕ್ಕೆ ಚಾಲನೆ ಸಿಗಲಿದೆ.

ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಮತ್ತು ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆರ್ ಸಿಬಿಗೆ ಮೊದಲ ಪಂದ್ಯವಿರುವುದು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ. ಈ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದ್ದು, ಎಲ್ಲಾ ಟಿಕೆಗಳು ಸೋಲ್ಡ್ ಔಟ್ ಆಗಿವೆ. ಈ ಬಾರಿ ಐಪಿಎಲ್ ಪಂದ್ಯಾವಳಿಯನ್ನು ಸ್ಪೋರ್ಟ್ಸ್ 18 ನೆಟ್ ವರ್ಕ್ ನಲ್ಲಿ, ಜಿಯೋ ಆಪ್ ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ