ದೆಹಲಿ: ಐಪಿಎಲ್ 2024 ರಲ್ಲಿ ರಿಷಬ್ ಪಂತ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು. ಪೃಥ್ವಿ ಶಾ 11, ಜ್ಯಾಕ್ ಫ್ರೇಝರ್ 23 ಗಳಿಸಿ ಔಟಾದರು. ಬಳಿಕ ಅಕ್ಸರ್ ಪಟೇಲ್ ಅಜೇಯ 66 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಆದರೆ ಪಂದ್ಯದ ದಿಕ್ಕು ಬದಲಾಗಿದ್ದು ರಿಷಬ್ ಪಂತ್ ಅಬ್ಬರದ ಬ್ಯಾಟಿಂಗ್ ನಿಂದಾಗಿ. 43 ಎಸೆತ ಎದುರಿಸಿದ 8 ಸಿಕ್ಸರ್ ಸಹಿತ ಅಜೇಯ 88 ರನ್ ಗಳಿಸಿದರು.
ಈ ಮೊತ್ತ ಬೆನ್ನತ್ತಿದ ಗುಜರಾತ್ ಟೈಟನ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಲಷ್ಟೇ ಶಕ್ತವಾಯಿತು. ಶುಬ್ಮನ್ ಗಿಲ್ ರನ್ನು ಬೇಗನೇ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ವೃದ್ಧಿಮಾನ್ ಸಹಾ 39 ರನ್ ಗಳಿಸಿದರು. ಸಾಯಿ ಸುದರ್ಶನ್ 39 ಎಸೆತಗಳಲ್ಲಿ 65 ರನ್ ಗಳಿಸಿ ಗೆಲುವಿನ ಆಸೆ ಚಿಗುರಿಸಿತು. ಅವರಿಗೆ ಸಾಥ್ ನೀಡಿದ ಡೇವಿಡ್ ಮಿಲ್ಲರ್ 55 ರನ್ ಗಳ ಕೊಡುಗೆ ನೀಡಿದರು.
ಕೊನೆಯ ಓವರ್ ನಲ್ಲಿ ಗೆಲುವಿಗೆ 19 ರನ್ ಗಳಿಸಬೇಕಾಗಿತ್ತು. ಮೊದಲ ಎರಡು ಬಾಲ್ ಗಳನ್ನು ಬೌಂಡರಿಗಟ್ಟಿದ ರಶೀದ್ ಖಾನ್ ಐದನೇ ಎಸೆತವನ್ನು ಸಿಕ್ಸರ್ ಗಟ್ಟಿದರು. ಕೊನೆಯ ಎಸೆತದಲ್ಲಿ ರನ್ ಗಳಿಸಲು ವಿಫಲರಾಗಿದ್ದರಿಂದ ಗುಜರಾತ್ 4 ರನ್ ಗಳ ಸೋಲು ಅನುಭವಿಸಬೇಕಾಯಿತು.