IPL 2025 Final: ಮೂರು ಆರ್ ಸಿಬಿ ಹೀಗೇ ಸೋತಿತ್ತು, ಇಂದೂ ಅದೇ ತಪ್ಪಾಗದಿದ್ರೆ ಸಾಕು
2009 ರಲ್ಲಿ ಟಾಸ್ ಗೆದ್ದ ನಾಯಕ ಅನಿಲ್ ಕುಂಬ್ಳೆ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಡೆಕ್ಕನ್ ಚಾರ್ಜಸ್ ಗಳಿಸಿದ್ದು ಕೇವಲ 143 ರನ್. ಇದನ್ನು ಚೇಸ್ ಮಾಡಿದ ಆರ್ ಸಿಬಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.
2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 205 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಆರ್ ಸಿಬಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. 2016 ರಲ್ಲಿ ಹೈದರಾಬಾದ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ 208 ರನ್ ಗಳಿಸಿತು. ಇದನ್ನು ಬೆನ್ನತ್ತಿದ ಆರ್ ಸಿಬಿ ಉತ್ತಮ ಆರಂಭ ಪಡೆದರೂ ಕೊನೆಗೆ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಮೂರೂ ಬಾರಿ ಚೇಸ್ ಮಾಡಿಯೇ ಸೋತಿದೆ. ಹೀಗಾಗಿ ಈ ಬಾರಿ ಮೊದಲು ಬ್ಯಾಟಿಂಗ್ ಮಾಡಿ ಗೆಲ್ಲಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.