ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ.
ಗುವಾಹಟಿಯ ಬರ್ಸಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಳೆಯಾಗುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಮಳೆ ಸ್ಥಗಿತವಾಗದಿದ್ದಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ.
ಸೋಮವಾರ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯವೂ ಮಳೆಗೆ ಆಹುತಿಯಾಗಿತ್ತು. ಈಡನ್ ಗಾರ್ಡನ್ ನಲ್ಲಿ ನಡೆಯಬೇಕಿದ್ದ ಪಂದ್ಯ ರದ್ದಾಗಿ ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಲಾಗಿತ್ತು.
ರಾಜಸ್ಥಾನ್ ರಾಯಲ್ಸ್ ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದು, ಈ ಗೆಲುವಿನ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಅತ್ತ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸೋತಿರುವ ಕಾರಣ ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಪಾಯಿಂಟ್ಸ್ ಟೇಬಲ್ನಲ್ಲಿ ಜಿಗಿತ ಕಾಣಲಿದೆ.
ಇನ್ನು ಉಭಯ ತಂಡಗಳು ಐಪಿಎಲ್ನಲ್ಲಿ ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ತಂಡವು 16 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡವು 14 ಪಂದ್ಯಗಳಲ್ಲಿ ಜಯ ಸಾಧಿಸಿದೆ.