ಒಂದೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಇಶಾಂತ್-ಇಶಾನ್ ಪದಾರ್ಪಣೆ!
ಟೀಂ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಅವಕಾಶ ಪಡೆದರು. ಕೆಎಸ್ ಭರತ್ ಸ್ಥಾನದಲ್ಲಿ ಇಶಾನ್ ಕಣಕ್ಕಿಳಿದಿದ್ದಾರೆ.
ಇವರ ಜೊತೆಗೆ ಈ ಪಂದ್ಯದ ಮೂಲಕ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕಾಮೆಂಟೇಟರ್ ಆಗಿ ಪದಾರ್ಪಣೆ ಮಾಡಿದ್ದಾರೆ. ಹಿರಿಯ ವೇಗಿ ಭಾರತ ತಂಡದಲ್ಲಿ ಅವಕಾಶ ಪಡೆಯುತ್ತಿಲ್ಲ. ಇದೀಗ ಅಧಿಕೃತವಾಗಿ ಕಾಮೆಂಟೇಟರ್ ಆಗಿ ಕರ್ತವ್ಯ ಆರಂಭಿಸಿದ್ದಾರೆ.