ಟೆಸ್ಟ್‌ನಲ್ಲಿಯೇಶತಕ ದಾಖಲೆ ಮಾಡಿದ ಅಯ್ಯರ್!

ಶುಕ್ರವಾರ, 26 ನವೆಂಬರ್ 2021 (13:04 IST)
ಕಾನ್ಪುರ : ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಪಂದ್ಯದಲ್ಲಿಯೇ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಚೊಚ್ಚಲ ಶತಕ ಸಿಡಿಸುವ ಮೂಲಕ ದಾಖಲೆ ಮಾಡಿದ್ದಾರೆ.
ಆ ಮೂಲಕ ಪದಾರ್ಪಣೆ ಟೆಸ್ಟ್ ಪಂದ್ಯದಲ್ಲಿಯೇ ಶತಕ ಸಿಡಿಸಿದ ಭಾರತದ 16ನೇ ಬ್ಯಾಟ್ಸ್ಮನ್ ಎಂಬ ಕೀರ್ತಿಗೆ ಅಯ್ಯರ್ ಶುಕ್ರವಾರ ಪಾತ್ರರಾದರು.
ನಿಯಮಿತ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ರಿಷಭ್ ಪಂತ್ ಅವರಂಥ ಕೀ ಆಟಗಾರರ ಅನುಪಸ್ಥಿತಿಯಲ್ಲಿ ಗುರುವಾರ ಟೆಸ್ಟ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಶ್ರೇಯಸ್ ಅಯ್ಯರ್ ಮನ ಮೋಹಕ ಬ್ಯಾಟಿಂಗ್ ಪ್ರದರ್ಶನ ತೋರಿದರು.
ಮೊದಲನೇ ದಿನ 136 ಎಸೆತಗಳನ್ನು ಎದುರಿಸಿ 75 ರನ್ ಗಳಿಸಿದ್ದ ಶ್ರೇಯಸ್ ಅಯ್ಯರ್, 4 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು.
ಚೊಚ್ಚಲ ಶತಕ ಸಿಡಿಸಲು ಶ್ರೇಯಸ್ ಅಯ್ಯರ್ 157 ಎಸೆತಗಳನ್ನು ತೆಗೆದುಕೊಂಡರು. ಇವರ ಈ ಅಜೇಯ ಇನಿಂಗ್ಸ್ನಲ್ಲಿ ಎರಡು ಸಿಕ್ಸರ್ ಹಾಗೂ 12 ಬೌಂಡರಿಗಳು ಒಳಗೊಂಡಿವೆ.
ಇನ್ನು 92 ಓವರ್ಗಳ ಅಂತ್ಯಕ್ಕೆ ಭಾರತ ತಂಡ ಪ್ರಥಮ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 288 ರನ್ ಗಳಿಸಿದೆ. ಶ್ರೇಯಸ್ ಅಯ್ಯರ್ಗೆ ಮೊದಲನೇ ದಿನ ಸಾಥ್ ನೀಡಿದ್ದ ರವೀಂದ್ರ ಜಡೇಜಾ(50) ಎರಡನೇ ರನ್ ಗಳಿಸದೆ ವಿಕೆಟ್ ಒಪ್ಪಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ