ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಚಾರಣೆಗೆ ಹಾಜರಾದ ನಟಿ ಜಾಕ್ವೆಲಿನ್ ಫರ್ನಾಂಡಿಸ್

ಬುಧವಾರ, 14 ಸೆಪ್ಟಂಬರ್ 2022 (16:45 IST)
ನವದೆಹಲಿ: ಅಕ್ರಮ ಹಣ  ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಂದು ದೆಹಲಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

200 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಖೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಕೂಡಾ ಶಾಮೀಲಾಗಿದ್ದಾರೆಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಇಂದು ದೆಹಲಿ ಪೊಲೀಸರು ಜಾಕ್ವೆಲಿನ್ ರನ್ನು ವಿಚಾರಣೆಗೊಳಪಡಿಸಿದ್ದಾರೆ.ಇದೇ ಮೊದಲ ಬಾರಿಗೆ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ರನ್ನು ವಿಚಾರಣೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ