ಪಂದ್ಯಕ್ಕೆ ಮೊದಲು ಪಾಕ್ ಆಕ್ರಮಿತ ಕಾಶ್ಮೀರದ ರಾಷ್ಟ್ರಗೀತೆ ಹಾಡಿದ ಜಮ್ಮು ಕ್ರಿಕೆಟಿಗರು!
ಪೌಲ್ವಾಮಾ ಹಂಟರ್ಸ್ ಮತ್ತು ಪಂಪೋರಾ ಇಲೆವೆನ್ ನಡುವಿನ ಕ್ಲಬ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿದೆ. ಅಷ್ಟೇ ಅಲ್ಲ, ಪ್ರೇಕ್ಷಕರೂ ಭಾರತ ವಿರೋಧಿ ಘೋಷಣೆ ಕೂಗುತ್ತಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಇನ್ನಷ್ಟೇ ಕ್ರಮ ಕೈಗೊಳ್ಳಬೇಕಿದೆ. ಘಟನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗುತ್ತಿದೆ.