ಟೀಂ ಇಂಡಿಯಾಗೆ ದೊಡ್ಡ ಆಘಾತ: ದ.ಆಫ್ರಿಕಾ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್

ಬುಧವಾರ, 25 ಸೆಪ್ಟಂಬರ್ 2019 (10:54 IST)
ಮುಂಬೈ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ.


ಗಾಯಕ್ಕೊಳಗಾಗಿರುವ ಬುಮ್ರಾ ಆಫ್ರಿಕಾ ಸರಣಿಯಿಂದ ಹೊರಬಿದ್ದಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತ ನೀಡಲಿದೆ. ಬುಮ್ರಾ ಈಗಾಗಲೇ ಎದುರಾಳಿಗಳ ಪಾಲಿಗೆ ಸಿಂಹ ಸ್ವಪ್ನರಾಗಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಹಿನ್ನಲೆಯಲ್ಲಿ ಪ್ರತೀ ಪಂದ್ಯವನ್ನೂ ಗೆಲ್ಲುವುದು ಟೀಂ ಇಂಡಿಯಾಕ್ಕೆ ಮುಖ್ಯವಾಗಿದೆ.

ಹೀಗಾಗಿ ಬುಮ್ರಾ ಅನುಪಸ್ಥಿತಿ ದೊಡ್ಡ ಹೊಡೆತ ನೀಡಲಿದೆ. ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರ ಸ್ಥಾನದಲ್ಲಿ ಟೆಸ್ಟ್ ತಂಡಕ್ಕೆ ಉಮೇಶ್ ಯಾದವ್ ಅವಕಾಶ ಪಡೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ