ಮುಂಬೈ: ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳುತ್ತಾ ಎಂಬ ಪ್ರಶ್ನೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಉತ್ತರಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಪಾಕಿಸ್ತಾನಕ್ಕೆ ಭಾರತ ತಂಡ ಕಳುಹಿಸಿಕೊಡಲು ಕೇಂದ್ರ ಸರ್ಕಾರದ ಒಪ್ಪಿಗೆಯಿಲ್ಲ. ಹೀಗಾಗಿ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರಕ್ಕೆ ಭಾರತ ತಂಡ ಪ್ರವಾಸ ಮಾಡದೇ ಎಷ್ಟೋ ವರ್ಷವೇ ಆಗಿದೆ. ಉಭಯ ದೇಶಗಳ ನಡುವೆ ಸರಣಿಯೂ ನಡೆಯುತ್ತಿಲ್ಲ.
ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಎರಡೂ ತಂಡಗಳೂ ಮುಖಾಮುಖಿಯಾಗುತ್ತಿವೆ. ಆದರೆ ಈ ಬಾರಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದೆ. ಹೀಗಾಗಿ ಭಾರತ ತಂಡ ಎದುರಾಳಿ ರಾಷ್ಟ್ರಕ್ಕೆ ಪ್ರಯಾಣಿಸಬೇಕಿದೆ. ಆದರೆ ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.
ಈ ಬಗ್ಗೆ ಜಯ್ ಶಾ ರನ್ನು ಪ್ರಶ್ನಿಸಿದಾಗ ಅವರು ಇದಕ್ಕೆ ಉತ್ತರಿಸಿದ್ದು, ಆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಟೂರ್ನಿ ಆರಂಭಕ್ಕೆ ಕೆಲವು ದಿನ ಮೊದಲು ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಈಗಿನ ಅಂದಾಜು ಪ್ರಕಾರ ಮಾರ್ಚ್ 1 ರಂದು ಲಾಹೋರ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಬೇಕಿದೆ.