ಸಚಿನ್ ಕಾಲಿಗೆ ಬಿದ್ದ ಜಾಂಟಿ ರೋಡ್ಸ್ ವಿಡಿಯೋ ವೈರಲ್

ಶುಕ್ರವಾರ, 15 ಏಪ್ರಿಲ್ 2022 (10:51 IST)
ಮುಂಬೈ: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿರುವ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಗೆ ಕಿಂಗ್ಸ್ ಪಂಜಾಬ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಂಜಾಬ್ ಪಂದ್ಯ ಗೆದ್ದ ಬಳಿಕ ಮೈದಾನಕ್ಕಿಳಿದ ಉಭಯ ತಂಡಗಳು ಪರಸ್ಪರ ಕೈಕುಲುಕಿ ಅಭಿನಂದಿಸುತ್ತಿದ್ದವು.

ಈ ವೇಳೆ ಜಾಂಟಿ ರೋಡ್ಸ್ ಮೈದಾನದಲ್ಲಿಯೇ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸುವ ಮೂಲಕ ಕ್ರಿಕೆಟ್ ದಿಗ್ಗಜನ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾರೆ. ಈ ಹಿಂದೆ ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್ ಕೂಡಾ ಮೈದಾನದಲ್ಲಿ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ