ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

Sampriya

ಶನಿವಾರ, 23 ಆಗಸ್ಟ್ 2025 (21:34 IST)
Photo Credit X
ಮುಂಬೈ: ಭಾರತ ತಂಡದ ರನ್‌ ಮಿಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಅವರು ಟೆಸ್ಟ್‌ ಮತ್ತು ಟಿ20 ಕ್ರಿಕೆಟ್‌ ಮಾದರಿಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಏಕದಿನ ಮಾದರಿಗೆ ವಿದಾಯ ಹೇಳಿಲ್ಲ. ಈ ಮಾದರಿಗೂ ವಿದಾಯ ಹೇಳಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಅವರು ಲಾರ್ಡ್ಸ್‌ನಲ್ಲಿ ಬ್ಯಾಟ್‌ ಹಿಡಿದು ಅಭ್ಯಾಸ ಆರಂಭಿಸಿದ್ದಾರೆ.

ಐಪಿಎಲ್ ನಂತರ ವಿರಾಮ ತೆಗೆದುಕೊಂಡಿದ್ದ ವಿರಾಟ್ ಕೊಹ್ಲಿ ಹಲವು ತಿಂಗಳಗಳ ಬಳಿಕ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಅಭ್ಯಾಸ ಆರಂಭಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಸರಣಿಗಾಗಿ ಅವರು ತಯಾರಿ ನಡೆಸುತ್ತಿದ್ದಾರೆ.

ಈಚೆಗೆ ವಿರಾಟ್‌ ಕೊಹ್ಲಿಯ ಬಿಳಿ ಗಡ್ಡದ ಫೋಟೋಗಳು ವೈರಲ್ ಆಗಿದ್ದು, ಅವರ ನಿವೃತ್ತಿ ಬಗ್ಗೆ ಚರ್ಚೆ ಆರಂಭವಾಗಿತ್ತು. ಬಿಸಿಸಿಐ ಅವರ ಏಕದಿನ ಭವಿಷ್ಯದ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. 2027ರ ಏಕದಿನ ವಿಶ್ವಕಪ್‌ವರೆಗೂ ಅವರು ಆಡುವ ಸಾಧ್ಯತೆ ಇದೆ.

ಐಪಿಎಲ್ ಬಳಿಕ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಂಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ಲಂಡನ್​ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಅವರೊಂದಿಗೆ ಲಂಡನ್ ಬೀದಿಯಲ್ಲಿ ಸಾಮಾನ್ಯರಂತೆ ನಡೆದಾಡುವ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು.

ಇದೀಗ ಅಭಿಮಾನಿಗಳು ಸಂತಸ ಪಡುವ ಮಾಹಿತಿಯೊಂದು ಲಂಡನ್​ನಿಂದ ಹೊರಬಿದ್ದಿದೆ.  ಮುಂಬರುವ ಏಕದಿನ ಸರಣಿಗಾಗಿ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಹೀಗಾಗಿ ಈ ಸರಣಿಗಾಗಿ ವಿರಾಟ್ ಕೊಹ್ಲಿ ಐತಿಹಾಸಿಕ ಲಾರ್ಡ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಸದ್ಯ ಆಟದಿಂದ ದೂರವಿದ್ದರೂ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧರಾಗುತ್ತಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಖುಷಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ