ಶತಕದ ಜೊತೆಗೆ ದಾಖಲೆ ಮಾಡಿದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್

ಸೋಮವಾರ, 11 ಸೆಪ್ಟಂಬರ್ 2023 (19:41 IST)
ಕೊಲೊಂಬೋ: ಏಷ್ಯಾ ಕಪ್ ಕ್ರಿಕೆಟ್ ನ ಭಾರತ-ಪಾಕಿಸ್ತಾನ ನಡುವಿನ ಸೂಪರ್ ಫೋರ್ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಕೆಲವು ದಾಖಲೆಗಳನ್ನೂ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಕೊಹ್ಲಿ 94 ಎಸೆತಗಳಿಂದ ಕೊಹ್ಲಿ 122 ರನ್ ಸಿಡಿಸಿದರು. ಇದರೊಂದಿಗೆ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 13 ಸಾವಿರ ರನ್ ಪೂರೈಸಿದರು. ಅತೀ ವೇಗವಾಗಿ 13 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಮಾಡಿದರು. ಈ ಮೂಲಕ ಸಚಿನ್ ದಾಖಲೆ ಮುರಿದರು. ಇದು ಏಕದಿನ ಕ್ರಿಕೆಟ್ ನಲ್ಲಿ ಅವರ 47 ನೇ ಏಕದಿನ ಶತಕವಾಗಿದೆ.

ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಗರಿಷ್ಠ ರನ್ ಜೊತೆಯಾಟವಾಡಿದ ದಾಖಲೆ ಮಾಡಿದರು. ಇಬ್ಬರೂ ಮುರಿಯದ ಮೂರನೇ ವಿಕೆಟ್ ಗೆ 233 ರನ್ ಕಲೆ ಹಾಕಿದರು. ಅಲ್ಲದೆ ಏಕದಿನ ಮಾದರಿಯ ಏಷ್ಯಾ ಕಪ್ ನಲ್ಲಿ ಇದು ಗರಿಷ್ಠ ರನ್ ಜೊತೆಯಾಟವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ